ಅಭಿಪ್ರಾಯ / ಸಲಹೆಗಳು

ಇಲಾಖೆಯ ಪಾತ್ರ

ರೇಷ್ಮೆ ಇಲಾಖೆಯು 1914ರಲ್ಲಿ ಪ್ರಾರಂಭವಾಗಿರುತ್ತದೆ.

ಇಲಾಖೆಯು ರಾಜ್ಯದ ರೇಷ್ಮೆ ಚಟುವಟಿಕೆಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಇಲಾಖೆಯು ಕೆಳಕಂಡ ಮುಖ್ಯ ಸೇವೆಗಳನ್ನು ಒದಗಿಸುತ್ತಿದೆ:

  1. ರೇಷ್ಮೆ ಕೃಷಿ ಚಟುವಟಿಕೆಗಳಾದ ಹಿಪ್ಪುನೇರಳೆ ವ್ಯವಸಾಯ, ರೇಷ್ಮೆ ಹುಳು ಸಾಕಾಣಿಕೆ, ನೂಲು ಬಿಚ್ಚಾಣಿಕೆ ಇತ್ಯಾದಿಗಳ ಬಗ್ಗೆ ಮಾರ್ಗದರ್ಶನ ಮತ್ತು ತರಬೇತಿ ನೀಡುವುದು.

  2. ಸಂಶೋಧನಾ ಸಂಸ್ಥೆಗಳು ಅಭಿವೃದ್ಧಿ ಪಡಿಸಿದ ಅಧಿಕ ಇಳುವರಿ ನೀಡುವ ಹಿಪ್ಪುನೇರಳೆ ಮತ್ತು ರೇಷ್ಮೆ ಹುಳುವಿನ ತಳಿಗಳನ್ನು ರೇಷ್ಮೆ ಕೃಷಿಕರಿಗೆ ಒದಗಿಸುವುದು.

  3. ಹಿಪ್ಪುನೇರಳೆ ಹಾಗೂ ರೇಷ್ಮೆ ಹುಳುವಿನ ಮೂಲ ಬಿತ್ತನೆ ನಿರ್ವಹಿಸುವುದು ಮತ್ತು ರೋಗರಹಿತ ರೇಷ್ಮೆ ಮೊಟ್ಟೆಗಳನ್ನು ರೈತರಿಗೆ ಒದಗಿಸಲು ವ್ಯವಸ್ಥೆಗಳನ್ನು ರೂಪಿಸುವುದು.

  4. ವಿಸ್ತರಣೆ, ಚಾಕಿ ಸಾಕಾಣಿಕೆ ಮತ್ತು ರೋಗ ನಿಯಂತ್ರಣ ಸೌಲಭ್ಯಗಳನ್ನು ರೇಷ್ಮೆ ಬೆಳೆಗಾರರಿಗೆ ಒದಗಿಸುವುದು.

  5. ರೇಷ್ಮೆ ಚಟುವಟಿಕೆಗಳಿಗಾಗಿ ಬ್ಯಾಂಕುಗಳಿಂದ ಸಾಲ ಸೌಲಭ್ಯ ಪಡೆಯಲು ರೈತರಿಗೆ / ನೂಲು ಬಿಚ್ಚಾಣಿಕೆದಾರರಿಗೆ ಸಹಾಯ ಮಾಡುವುದು.

  6. ರೇಷ್ಮೆ ಗೂಡು ಮತ್ತು ಕಚ್ಚಾ ರೇಷ್ಮೆ ಮಾರಾಟಕ್ಕೆ ಸೌಲಭ್ಯಗಳನ್ನು ಒದಗಿಸುವುದು.

  7. ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಹೊಸ ತಾಂತ್ರಿಕತೆಗಳನ್ನು ಅಳವಡಿಸಿ ಉತ್ಪಾದನೆ, ಉತ್ಪಾದಕತೆ ಹೆಚ್ಚಿಸಿ, ಗುಣಮಟ್ಟದ ರೇಷ್ಮೆ ಗೂಡು ಹಾಗೂ ಶ್ರೇಣಿಕೃತ ಕಚ್ಚಾ ರೇಷ್ಮೆ ಉತ್ಪಾದಿಸಲು ಪ್ರೇರೇಪಿಸುವುದು.

  8. ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಬಲಪಡಿಸುವುದು.

  9. ಅಂತರಾಷ್ಟ್ರೀಯ ಗುಣಮಟ್ಟದ ರೇಷ್ಮೆ ಉತ್ಪಾದಿಸಲು ಸ್ವಯಂಚಾಲಿತ ನೂಲು ಬಿಚ್ಚಾಣಿಕೆ ಘಟಕಗಳ ಸ್ಥಾಪನೆಗೆ ಸಹಾಯ ನೀಡುವುದು.

  10. ಇಲಾಖೆಯ 06 ವಿವಿಧ ಸೇವೆಗಳನ್ನು ʻʻಸಕಾಲʼʼದ ಅಡಿಯಲ್ಲಿ ಗುರುತಿಸಲಾಗಿದೆ.

ಇತ್ತೀಚಿನ ನವೀಕರಣ​ : 25-11-2021 04:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರೇಷ್ಮೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080